ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಮತ್ತೊಂದು ಅಕ್ರಮ ಪತ್ತೆಯಾಗಿದೆ. ತುಂಡುಭೂಮಿ ಹಂಚಿಕೆಯಲ್ಲಿಯೂ ಪ್ರಾಧಿಕಾರ ಗೋಲ್ಮಾಲ್ ಮಾಡಿರುವುದು ಗೊತ್ತಾಗಿದೆ.
ಹಿಂದಿನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವಧಿಯಲ್ಲಿ ಅಕ್ರಮ ನಡೆದಿದೆ. ಮುಡಾದಿಂದ ಕಾನೂನು ಬಾಹಿರವಾಗಿ ತುಂಡುಭೂಮಿ ಹಂಚಿಕೆ ಮಾಡಲಾಗಿದೆ. ಇದರಿಂದ ಪ್ರಾಧಿಕಾರ ಮತ್ತು ರಾಜ್ಯ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿದೆ. ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಮಿತಿಯಿಂದ ತನಿಖೆ ನಡೆಸಲಾಗಿದೆ. ಸಮಿತಿಯ ತನಿಖೆಯಲ್ಲಿ ಅಕ್ರಮ ನಡೆದಿರುವುದು ಬಹಿರಂಗವಾಗಿದೆ.
ಒಟ್ಟು ಎಂಟು ಪ್ರಕರಣಗಳನ್ನು ಪಟ್ಟಿ ಮಾಡಿ ಪ್ರಭುಲಿಂಗ ಸಮಿತಿ ವರದಿ ನೀಡಿದೆ. 8 ಪ್ರಕರಣದಲ್ಲಿ ನಿಯಮಗಳನ್ನು ಪಾಲಿಸದೆ ಭೂಮಿ ಮಂಜೂರು ಮಾಡಲಾಗಿದೆ ಎಂದು ಗೊತ್ತಾಗಿದ್ದು, ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ. ಸೆ. 21ರಂದು ಮುಡಾ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ಹೇಳಲಾಗಿದೆ.