ಹೈದರಾಬಾದ್ : ಪುಷ್ಪ-2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸ್ ವಿಚಾರಣೆಗೆ ಅಲ್ಲು ಅರ್ಜುನ್ ಹಾಜರಾಗಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದು, ಇಂದು ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದಾರೆ.
ಪುಷ್ಪ-2 ಸಿನಿಮಾ ಪ್ರದರ್ಶನದ ವೇಳೆ ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ತೆಲುಗು ನಟ ಅಲ್ಲು ಅರ್ಜುನ್ ಬಂಧನಕ್ಕಿಡಾಗಿ ಜೈಲು ಸೇರಿದ್ದರು. ಬಳಿಕ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 4 ರಂದು ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ‘ಪುಷ್ಪ 2’ ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ರೇವತಿ ಮೃತಪಟ್ಟಿದ್ದರು. 8 ವರ್ಷದ ಪುತ್ರ ಪ್ರಸ್ತುತ ನಗರದ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.