ಬೆಂಗಳೂರು: ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮಾತುಕತೆ ನಡೆಸಿದ ಸಿಎಂ, ಭೂಸ್ವಾಧೀನಕ್ಕಾಗಿ ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ್ದು, 430 ಎಕರೆಗೆ ಅಂತಿಮ ಅಧಿಸೂಚನೆ ಹೊರಬಿದ್ದಿದೆ. ಇಂತಹ ಸಂದರ್ಭದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಹೇಳಿದ್ದಾರೆ.
ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಲಾಗಿದ್ದು, ಮತ್ತೆ ಹೊಸದಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸಬಾರದು ಎಂದು ರೈತರ ನಿಯೋಗ ಮನವಿ ಮಾಡಿದೆ.
ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ವಾಪಸ್ ನೀಡಲು ಅವಕಾಶವಿಲ್ಲ. ಆದರೂ ಈ ನಿಟ್ಟಿನಲ್ಲಿ ರೈತರ ಹಿತಾಸಕ್ತಿಯನ್ನು ಪರಿಗಣಿಸಲಾಗುವುದು. ಜನಪ್ರತಿನಿಧಿಗಳು ಮತ್ತು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ರೈತರ ನಿಯೋಗಕ್ಕೆ ಸಿಎಂ ಭರವಸೆ ನೀಡಿದ್ದಾರೆ.