ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ದಲಿತ ಪರ ಸಂಘಟನೆಗಳಿಂದ ಇಂದು ಕಲಬುರಗಿ ಬಂದ್ ಗೆ ಕರೆ ನೀಡಲಾಗಿದ್ದು, ನಗರದ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಮಕ್ಕಳ ಸುರಕ್ಷತೆ ಹಿನ್ನೆಲೆ ನಗರದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಡಿಡಿಪಿಐ ಸೂರ್ಯಕಾಂತ್ ಮದಾನೆ ಪ್ರಕಟಣೆ ಹೊರಡಿಸಿದ್ದಾರೆ.ಸಂಸತ್ ನಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರೆದಿದೆ. ದೇಶದ ವಿವಿಧೆಡೆಯೂ ಅಮಿತ್ ಶಾ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದ್ದು, ಇಂದು ಕಲಬುರಗಿ ಬಂದ್ ಗೆ ಕರೆ ನೀಡಲಾಗಿದೆ.