ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಕೆರೂರ ಸಮೀಪದ ರಡ್ಡೇರ ತಿಮ್ಮಾಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದನ್ನು ಪ್ರಶ್ನಿಸಿದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.
ವೆಂಕಟರೆಡ್ಡಿ ಫಕೀರಡ್ಡಿ ಶೇಷಪ್ಪನವರ(36) ಕೊಲೆಯಾದ ವ್ಯಕ್ತಿ. ಘಟನೆಗೆ ಸಂಬಂಧಿಸಿದಂತೆ 8 ಮಂದಿ ವಿರುದ್ಧ ಕೇಸು ದಾಖಲಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಮೂವರ ಬಂಧನಕ್ಕೆ ಶೋಧ ಕಾರ್ಯ ಕೈಗೊಳ್ಳಲಾಗಿದೆ.
ಹನುಮಂತ ನಿಲಾರ ಮತ್ತು ಆತನ ಪತ್ನಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು. ಮದ್ಯದ ಖಾಲಿ ಬಾಟಲಿ ಮತ್ತು ಪ್ಯಾಕೆಟ್ ಗಳನ್ನು ವೆಂಕಟರೆಡ್ಡಿಯ ಮನೆ ಮುಂದೆ ಹಾಕುತ್ತಿದ್ದರು. ಈ ಬಗ್ಗೆ ಆಕ್ಷೇಪಿಸಿದಕ್ಕೆ ಎಂಟು ಮಂದಿ ಸೇರಿ ವೆಂಕಟರೆಡ್ಡಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.