BREAKING : ಕಾಲ್ತುಳಿತದಲ್ಲಿ ‘ಮಹಿಳೆ’ ಸಾವು ಕೇಸ್ : ಪೊಲೀಸ್ ವಿಚಾರಣೆಗೆ ಹಾಜರಾದ ನಟ ‘ಅಲ್ಲು ಅರ್ಜುನ್’ |Actor allu arjun

ಹೈದರಾಬಾದ್ : ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಗೆ ನಟ ಅಲ್ಲು ಅರ್ಜುನ್ ಹಾಜರಾಗಿದ್ದಾರೆ.

ವಕೀಲರ ಜೊತೆ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಬಂದ ನಟ ಅಲ್ಲು ಅರ್ಜುನ್ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗುವ ಮುನ್ನ ತಮ್ಮ ಪತ್ನಿ, ಮಕ್ಕಳನ್ನು ಅಪ್ಪಿಕೊಂಡು ತೆರಳಿದ್ದಾರೆ.

ಪುಷ್ಪ-2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸ್ ವಿಚಾರಣೆಗೆ ಅಲ್ಲು ಅರ್ಜುನ್ ಹಾಜರಾಗಿದ್ದಾರೆ.ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಪೊಲೀಸರು ಇಂದು ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದಾರೆ.

ಪುಷ್ಪ-2 ಸಿನಿಮಾ ಪ್ರದರ್ಶನದ ವೇಳೆ ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ತೆಲುಗು ನಟ ಅಲ್ಲು ಅರ್ಜುನ್ ಬಂಧನಕ್ಕಿಡಾಗಿ ಜೈಲು ಸೇರಿದ್ದರು. ಬಳಿಕ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 4 ರಂದು ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ‘ಪುಷ್ಪ 2’ ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ರೇವತಿ ಮೃತಪಟ್ಟಿದ್ದರು. 8 ವರ್ಷದ ಪುತ್ರ ಪ್ರಸ್ತುತ ನಗರದ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read