ಮಂಗಳೂರು: ಶಾಲಾ ಕೊಠಡಿಯಲ್ಲಿ ಯುವತಿಯೊಬ್ಬಳನ್ನು ಕೂಡಿ ಹಾಕಿ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆಂದು ಡಿ.14ರಂದು ಯುವತಿ ತನ್ನ ಮನೆಯವರೊಂದಿಗೆ ಶಾಲೆಗೆ ಬಂದಿದ್ದಳು. ಈ ವೇಳೆ ಯುವತಿಯನ್ನು ಆರೋಪಿ ಶಾಲೆಯ ಕೊಠಡಿಯಲ್ಲಿಯೇ ಕೂದಿ ಹಾಕಿ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ.
ಬಂಟ್ವಾಳ ಠಾಣೆಯಲ್ಲಿ ಸಂತ್ರಸ್ತ ಯುವತಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಜಯಂತ್ ಎಂದು ಗುರುತಿಸಲಾಗಿದೆ.