ಬೆಂಗಳೂರು: ಬಳ್ಳಾರಿ, ಬೆಳಗಾವಿ ಬಳಿಕ ಇದೀಗ ಬೆಂಗಳೂರಿನಲ್ಲಿ ಬಾಣಂತಿಯರ ಸಾವು ಪ್ರಕರಣ ಮುಂದುವರೆದಿದ್ದು, ನಿನ್ನೆ ಇಬ್ಬರು ಬಣಂತಿಯರು ಮೃತಪಟ್ಟಿರುವ ಬಗ್ಗೆ ವರದಿಯಾಗಿತ್ತು. ಈ ಘಟನೆಗಳ ಬೆನ್ನಲ್ಲೇ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಕಿಡಿಕಾರಿದೆ.
ಕರ್ನಾಟಕದಲ್ಲಿ ಬಾಣಂತಿಯರ ಮರಣ ಮೃದಂಗ ಮುಂದುವರೆಯುತ್ತಲೇ ಇದೆ! ಬಾಣಂತಿಯರ ಕೊಲೆಗಾರ ಕಾಂಗ್ರೆಸ್ ಸರ್ಕಾರ ಮಾತ್ರ ಇನ್ನೂ ಸಹ ನಿದ್ರೆಯಿಂದ ಎಚ್ಚರವಾಗಿಲ್ಲ!! ಎಂದು ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ.
ಸಿಎಂ ಸಿದ್ದರಾಮಯ್ಯ ಅವರೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೆ, ತಾಯಿ ಪ್ರೀತಿಯಿಂದ ವಂಚಿತವಾಗುವ ಅದೆಷ್ಟೊ ಕಂದಮ್ಮಗಳ ಶಾಪ ನಿಮ್ಮ ಸರ್ಕಾರಕ್ಕೆ ತಟ್ಟದೆ ಇರದು ಎಂದು ಆಕ್ರೋಶ ವ್ಯಕ್ತಪಡಿಸಿದೆ.