ಬೆಂಗಳೂರು: ನಟ ಶಿವರಾಜ್ ಕುಮಾರ್ ಅಮೆರಿಕದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಚಿಕಿತ್ಸೆ ಪಡೆಯಲು ಅವರು ದಾಖಲಾಗಿದ್ದು, ಆಸ್ಪತ್ರೆಯ ವೈದ್ಯರು ಶಿವಣ್ಣರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಿದ್ದಾರೆ.
ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರು ಶಸ್ತ್ರಚಿಕಿತ್ಸೆಯ ನಂತರ ಅವರು ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ.
ಆಸ್ಪತ್ರೆಗೆ ದಾಖಲಾದ ಶಿವರಾಜ್ ಕುಮಾರ್ ಅವರಿಗೆ ಸಿಎಂ ಸಿದ್ಧರಾಮಯ್ಯ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
“ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.
ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ.
ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು, ಅವರನ್ನು ಕಾಪಾಡಲಿದೆ.” ಎಂದು ಸಿಎಂ ತಿಳಿಸಿದ್ದಾರೆ.
ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.
ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ.… pic.twitter.com/dTNCjYFwME— Siddaramaiah (@siddaramaiah) December 24, 2024