ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಪ್ರತಿ ಕ್ವಿಂಟಾಲ್ ತೊಗರಿಗೆ 7750 ರೂಪಾಯಿ, ಕಡಲೆಗೆ 5,650 ರೂ. ದರ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಲಾಗುವುದು. 3.06 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮತಿ ನೀಡಲಾಗಿದೆ.
ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು, ರಾಯಚೂರು ಜಿಲ್ಲೆಗಳಲ್ಲಿ ಕಡಲೆ ಖರೀದಿ ಕೇಂದ್ರ ಆರಂಭಿಸಲಾಗುವುದು. ಬೆಂಬಲ ಬೆಲೆಯಡಿ 96,478 ಮೆಟ್ರಿಕ್ ಟನ್ ಕಡಲೆ ಖರೀದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.