ಬೆಂಗಳೂರು: ಹೋಟೆಲ್ ನಲ್ಲಿ ಊಟ ಸೇವಿಸಿದ ಮೂವರು ಮಕ್ಕಳು ಅಸ್ವಸ್ಥರಾದ ಘಟನೆ ಬೆಂಗಳೂರಿನ ರಾಜಾಜಿನಗರದ ದಿ ಬ್ಲಾಕ್ ಪರ್ಲ್ ಹೋಟೆಲ್ ನಲ್ಲಿ ನಡೆದಿದೆ.
ಬರ್ತಡೇ ಪಾರ್ಟಿ ಮುಗಿಸಿ ಎರಡು ಕುಟುಂಬಗಳು ಊಟಕ್ಕೆ ಬಂದಿದ್ದರು. ನಾನ್ವೆಜ್ ಊಟ ಮಾಡುತ್ತಿದ್ದಾಗಲೇ ಮೂವರು ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಮೂವರು ಮಕ್ಕಳನ್ನು ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ಬಳಿಕ ಹೋಟೆಲ್ ಸಿಬ್ಬಂದಿ ಊಟವನ್ನು ಬೇರೆ ಕಡೆ ಸಾಗಿಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಹೋಟೆಲ್ ಗೆ ಬಂದಿದ್ದ ಗ್ರಾಹಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಹೋಟೆಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರು ಸಿಬ್ಬಂದಿಯನ್ನು ಕರೆದುಕೊಂಡು ಹೋಗಿದ್ದಾರೆ. ಕಳಪೆ ಆಹಾರ ನೀಡಿರುವುದೇ ಘಟನೆಗೆ ಕಾರಣವೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.