ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಅಲ್ಲಲ್ಲಿ ತುಂತುರು ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಿಂಗಾರು ಮಳೆ ಮಾರುತಗಳ ಪ್ರಭಾವದಿಂದ ಈಗಾಗಲೇ ಬೆಂಗಳೂರು ಸೇರಿ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 26, 27ರಂದು ಉತ್ತರ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರೆಯುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.