HomeKarnataka5, 8ನೇ ತರಗತಿಯಲ್ಲಿ ಫೇಲ್ ಮಾಡುವ ನೀತಿ ರಾಜ್ಯದಲ್ಲಿ ಜಾರಿಗೊಳಿಸದಂತೆ ಆಗ್ರಹ

5, 8ನೇ ತರಗತಿಯಲ್ಲಿ ಫೇಲ್ ಮಾಡುವ ನೀತಿ ರಾಜ್ಯದಲ್ಲಿ ಜಾರಿಗೊಳಿಸದಂತೆ ಆಗ್ರಹ

ಬೆಂಗಳೂರು: 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆ ನಂತರ ಮರು ಪರೀಕ್ಷೆಯಲ್ಲಿಯೂ ಫೇಲಾದ ಮಕ್ಕಳನ್ನು ಅದೇ ತರಗತಿಯಲ್ಲಿ ಮತ್ತೊಂದು ವರ್ಷ ತಡೆ ಹಿಡಿಯಲು ಕೇಂದ್ರ ಸರ್ಕಾರ ಜಾರಿಗೊಳಿಸಿದ ನಿಯಮವನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಬಾರದು ಎಂದು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಂದೋಲನಗಳ ಸಮನ್ವಯ(ಫಾಫ್ರೆ) ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಕುರಿತು ಪತ್ರ ಬರೆದಿರುವ ಫಾಫ್ರೆ ಪ್ರಧಾನ ಸಂಚಾಲಕ ಮತ್ತು ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಯುಪಿಎ ಜಾರಿಗೆ ತಂದ ಆರ್‌ಟಿಇ ನೀತಿ 8ನೇ ತರಗತಿವರೆಗೆ ಯಾವುದೇ ಮಕ್ಕಳನ್ನು ಒಂದೇ ತರಗತಿಯಲ್ಲಿ ತಡೆ ಹಿಡಿಯುವುದಾಗಲಿ ಅನುತ್ತೀರ್ಣಗೊಳಿಸುವುದನ್ನಾಗಲಿ ನಿಷೇಧಿಸಲಾಗಿತ್ತು. ಮಕ್ಕಳು ಶಾಲೆಯಿಂದ ಹೊರಗುಳಿಯುವುದನ್ನು ತಪ್ಪಿಸಲು ಈ ಕಾಯ್ದೆ ತರಲಾಗಿತ್ತು. ಈಗ ಸರ್ಕಾರದ ನೀತಿಯು ಆರ್‌ಟಿಇ ಮೂಲ ಉದ್ದೇಶಕ್ಕೆ ವಿರುದ್ಧವಾಗಿದ್ದು, ಇದನ್ನು ರಾಜ್ಯದಲ್ಲಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular