ಅರ್ಜೆಂಟೀನಾದ ಕ್ಯಾಟಮಾರ್ಕಾದಲ್ಲಿ ಇಂದು ಬೆಳ್ಳಂ ಬೆಳಗ್ಗೆ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪಶಾಸ್ತ್ರ ಕೇಂದ್ರ (ಇಎಂಎಸ್ಸಿ) ತಿಳಿಸಿದೆ.
ಭೂಕಂಪವು 133 ಕಿ.ಮೀ (82.64 ಮೈಲಿ) ಆಳದಲ್ಲಿತ್ತು ಎಂದು ಇಎಂಎಸ್ಸಿ ತಿಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿದೆ.