BIG NEWS : ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ‘ಶಸ್ತ್ರಚಿಕಿತ್ಸೆ’ ಯಶಸ್ವಿ |Actor Shivarajkumar

ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ.

ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆಪರೇಷನ್ ಸಕ್ಸಸ್ ಆಗಿದೆ ಎಂದು ಮೂಲಗಳು ತಿಳಿಸಿದೆ. ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ ಎಂದು ಹೇಳಲಾಗಿದೆ. ಸತತ 6 ಗಂಟೆಗಳ ಕಾಲ ಯಶಸ್ವಿ ಆಪರೇಷನ್ ನಡೆಸಲಾಗಿದೆ. ಭಾರತೀಯ ಕಾಲಮಾನ ರಾತ್ರಿ 11 :30 ಕ್ಕೆ ಆಪರೇಷನ್ ಮುಗಿದಿದೆ.

ಶಿವಣ್ಣ 30 ದಿನ ಅಲ್ಲೇ ವಿಶ್ರಾಂತಿ ಪಡೆದು ನಂತರ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಶಿವಣ್ಣ ಸಂಪೂರ್ಣ ಗುಣಮುಖರಾಗಿ ಬರಲೆಂದು ಆಪ್ತರು ಹಾಗೂ ಅಭಿಮಾನಿ ಬಳಗ ವಿಶೇಷ ಪೂಜೆ-ಹೋಮ ಹವನ ನಡೆಸಿದ್ದಾರೆ, ಡಿ.18 ರಂದು ಪತ್ನಿ ಗೀತಾ ಶಿವರಾಜ್ ಕುಮಾರ್ , ಪುತ್ರಿ ನಿವೇದಿತಾ ಹಾಗೂ ಆಪ್ತರ ಜೊತೆ ಅಮೆರಿಕಕ್ಕೆ ನಟ ಶಿವರಾಜ್ ಕುಮಾರ್ ಪ್ರಯಾಣ ಬೆಳೆಸಿದ್ದರು.

ಸಿಎಂ ಸಿದ್ದರಾಮಯ್ಯ ಟ್ವೀಟ್

ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ. ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು ಕಾಪಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read