ಚಿತ್ರದುರ್ಗ : ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ಸಂಭವಿಸಿದ್ದು, ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗದ ಚಳ್ಳಕೆರೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಗಾಂಧಿನಗರ ಬಡಾವಣೆಯ ರಂಗಸ್ವಾಮಿ (48) ಎಂದು ಗುರುತಿಸಲಾಗಿದೆ. ಡಿ.18 ರಂದು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದಂತಹ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.