ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಫಾರಂನಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಬಬ್ಬೂರು ಫಾರಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಿ. ರಮೇಶ್ ಅಮಾನತುಗೊಂಡವರು. ವಿದ್ಯಾರ್ಥಿ ಮೇಲೆ ಶಿಕ್ಷಕ ಬಿ. ರಮೇಶ್ ಅವರು ಹಲ್ಲೆ ಮಾಡಿರುವುದನ್ನು ಖಂಡಿಸಿ, ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಭಾರತೀಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ದೂರು ಸಲ್ಲಿಸಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಮಂಗಳವಾರ ಶಿಕ್ಷಕ ಬಿ. ರಮೇಶ್ ಅವರನ್ನು ಅಮಾನತು ಮಾಡಿದ್ದಾರೆ.