ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ ನಿಂದ ಕೋಟಿ ಕೊಟಿ ಸಾಲ ಪಡೆದುಕೊಂಡಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಿಂದ ಈಶ್ವರ ಮಂಗಲದ ಅಬೂಬಕ್ಕರ್ ಸಿದ್ದಿಕ್ ಕೋಟ್ಯಂತರ ರೂಪಾಯಿ ಗೋಲ್ಡ್ ಲೋನ್ ಪಡೆದುಕೊಂಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸಾಲ ಪಡೆದ ಅಬೂಬಕ್ಕರ್ ಸಿದ್ದಿಕ್, ಬ್ಯಾಂಕ್ ಆಡಳಿತ ಮಂಡಳಿ, ನೌಕರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
500 ನಕಲಿ ಬಳೆಗಳನ್ನು ಇಟ್ಟು ಅಬ್ಬಕ್ಕರ್ ಸಿದ್ದಿಕ್ ಸಾಲ ಪಡೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನ 16 ಶಾಖೆಗಳು ಇವೆ. ಮಂಗಳೂರಿನ ಪಡಿಲ್ ನಲ್ಲಿ ಇರುವ ಶಾಖೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿರುವುದು ಬೆಳಕಿಗೆ ಬಂದಿದೆ. ಚಿನ್ನ ಪರೀಕ್ಷೆ ನಡೆಸುವ ಸರಪ, ಬ್ಯಾಂಕ್ ಅಧ್ಯಕ್ಷ, ನಿರ್ದೇಶಕರು, ಮ್ಯಾನೇಜರ್, ಸಿಬ್ಬಂದಿ ಸಹಕಾರದಿಂದ ಅವ್ಯವಹಾರ ನಡೆಸಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಬ್ಯಾಂಕ್ ಸದಸ್ಯರು, ಮಾಜಿ ನಿರ್ದೇಶಕ ಡಿ.ಲೋಕನಾಥ್ ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಫ್ ಐ ಆರ್ ದಾಖಲಿಸಲಾಗಿದೆ.