HomeKarnatakaJOB ALERT : ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

JOB ALERT : ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ”ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆದ್ದರಿಂದ 21 ರಿಂದ 35ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಜನವರಿ, 08 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು, ದೂ.ಸಂ.ಆನಂದ್ 9632104204 ಹಾಗೂ ಲಕ್ಷ್ಮಿ-7204363367 ಇವರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular