HomeKarnatakaBIG UPDATE : ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ : ಕರ್ನಾಟಕದ ಮೂವರು ಯೋಧರು...

BIG UPDATE : ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ : ಕರ್ನಾಟಕದ ಮೂವರು ಯೋಧರು ಹುತಾತ್ಮ.!

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕ್ಕೆ ಉರುಳಿ ಕರ್ನಾಟಕ ಮೂಲದ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಬೆಳಗಾವಿ, ಬಾಗಲಕೋಟೆ, ಉಡುಪಿ ಜಿಲ್ಲೆಯ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಮೃತ ಯೋಧರನ್ನು  ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಎಂದು ಗುರುತಿಸಲಾಗಿದೆ,  ಹಾಗೂ ದುರಂತದಲ್ಲಿ ಮಹಾರಾಷ್ಟ್ರದ ಇಬ್ಬರು ಯೋಧರು ಅಸುನೀಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

160 ಅಡಿಯ ಕಂದಕಕ್ಕೆ ಸೇನಾ ವಾಹನ ಬಿದ್ದು ದುರಂತ ಸಂಭವಿಸಿದೆ. ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶ ಬಲ್ನೋಯಿ ಮೂಲಕ ಸೇನಾ ವಾಹನ ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ.ಅಪಘಾತದಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular