ಕಾಬೂಲ್: ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯ ಮೇಲೆ ಪಾಕಿಸ್ತಾನದಿಂದ ಸರಣಿ ವೈಮಾನಿಕ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 15 ಜನ ಸಾವನ್ನಪ್ಪಿದ್ದಾರೆ. ದಾಳಿಯ ಭಯಾನಕ ವಿಡಿಯೋ ವೈರಲ್ ಆಗಿದೆ.
ತರಬೇತಿ ಕೇಂದ್ರದ ಮೇಲೆ ನಡೆದ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿಯಲ್ಲಿ ಉಲ್ಲೇಖಿಸಲಾದ ನಾಲ್ವರು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆಯಾಗಿ, ಅಫ್ಘಾನ್ ರಕ್ಷಣಾ ಸಚಿವಾಲಯವು ದಾಳಿಯನ್ನು ಬಲವಾಗಿ ಖಂಡಿಸಿತು, ಇದು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಕರೆದಿದೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಾಗರಿಕರನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಲಾಗಿದ್ದು, ಬಲಿಯಾದವರಲ್ಲಿ ಹೆಚ್ಚಿನವರು ಪಾಕಿಸ್ತಾನದ ವಜಿರಿಸ್ತಾನ್ ಪ್ರದೇಶದ ನಿರಾಶ್ರಿತರು ಎಂದು ಸಚಿವಾಲಯ ಹೇಳಿದೆ.ಬಾಂಬ್ ದಾಳಿಗೆ ಪಾಕಿಸ್ತಾನದ ಜೆಟ್ಗಳು ಕಾರಣ. ಬರ್ಮಾಲ್ನ ಮುರ್ಗ್ ಬಜಾರ್ ಗ್ರಾಮವನ್ನು ನಾಶಪಡಿಸಲಾಗಿದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಈ ಬೆಳವಣಿಗೆ ನಡೆದಿದೆ.
Rare Pakistani airstrikes rock Afghan border
Pakistan launched rare airstrikes Tuesday, targeting suspected Taliban hideouts in Afghanistan’s Paktika province, dismantling a training camp and killing insurgents, according to security officials.#Taliban pic.twitter.com/bP4K7WaI2f
— RT (@RT_com) December 25, 2024