ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮೃತ ಯೋಧರನ್ನು ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಎಂದು ಗುರುತಿಸಲಾಗಿದೆ, ಹಾಗೂ ದುರಂತದಲ್ಲಿ ಮಹಾರಾಷ್ಟ್ರದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು.
ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.ದೇಶ ಸೇವೆಗಾಗಿ ಜೀವ… pic.twitter.com/K5mDBIn8sS
— Siddaramaiah (@siddaramaiah) December 25, 2024