ಮಂಡ್ಯ: ಮಂಡ್ಯ ಅಬಕಾರಿ ಇಲಾಖೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಶುರುವಾಗಿದೆ.
ಮಂಡ್ಯ ಲೋಕಾಯುಕ್ತ ಅಧಿಕಾರಿಗಳು ಅಬಕಾರಿ ಇಲಾಖೆ ಡಿಸಿ ರವಿಶಂಕರ್ ಹಾಗೂ ಮದ್ದೂರು ಅಬಕಾರಿ ಇನ್ಸ್ ಪೆಕ್ಟರ್ ಶಿವಕುಮಾರ್ ಆರಾಧ್ಯ ವಿರುದ್ಧ ಕಲಂ 7(a) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರ ಅಡಿ ಪ್ರಕರಣ ದಾಖಲಿಸಿಕೊಂಡು ಲೋಕಾಯುಕ್ತ ತನಿಖೆ ಆರಂಭಿಸಿದ್ದಾರೆ.
ಮಂಡ್ಯದ ಮದ್ದೂರು ತಾಲೂಕಿನ ಚಂದೂಪುರ ಗ್ರಾಮದ ಪುನೀತ್ ಬಾರ್ ಎಂಡ್ ರೆಸ್ಟೋರೆಂಟ್ ಗಾಗಿ ಸಿಎಲ್-7 ಬಾರ್ ಲೈಸನ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪುನೀತ್ ಆಡಿಯೋ, ವಿಡಿಯೋ ಸಾಕ್ಷ್ಯ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಎಫ್ ಐ ಆರ್ ದಾಖಲಾಗಿದೆ.