alex Certify BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ : ಒಂದೇ ಕುಟುಂಬದ ನಾಲ್ವರು ದುರ್ಮರಣ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ : ಒಂದೇ ಕುಟುಂಬದ ನಾಲ್ವರು ದುರ್ಮರಣ.!

ಹಾವೇರಿ : ಹಾವೇರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತೆಯಲ್ಲಿ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ತಡಸ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.ಮೃತರನ್ನು ಬೆಂಗಳೂರು ಮೂಲದ ಚಂದ್ರಮ್ಮ (59) ಅವರ ಪುತ್ರಿ ಮೀನಾ (38) ಕಾರು ಚಾಲಕ ಮಹೇಶ್ ಕುಮಾರ್ (41) ಧನ್ವೀರ್ (11) ಎಂದು ಗುರುತಿಸಲಾಗಿದೆ.

2 ಕಾರುಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

 

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...