ಚೆನ್ನೈನ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಬುಧವಾರ ಬೆಳಿಗ್ಗೆ ಲೈಂಗಿಕ ದೌರ್ಜನ್ಯ ನಡೆದಿದೆ.
ಬುಧವಾರ ಮುಂಜಾನೆ ಈ ಘಟನೆ ನಡೆದಿದೆ. ಮಹಿಳೆ ತನ್ನ ಸ್ನೇಹಿತನೊಂದಿಗೆ ಕ್ಯಾಂಪಸ್ ನಲ್ಲಿ ಕುಳಿತಿದ್ದಳು.
ಅಲ್ಲಿಗೆ ಬಂದ ಇಬ್ಬರು ಕಾಮುಕರು ಸ್ನೇಹಿತನ ಮೇಲೆ ಹಲ್ಲೆ ನಡೆಸಿ ನಂತರ ಆಕೆಯನ್ನು ಪೊದೆಯೊಳಗೆ ಎಳೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವರದಿ ತಿಳಿಸಿದೆ.
ಸ್ನೇಹಿತ ಕೂಡ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಾಗಿದ್ದಾನೆ. ದಾಳಿಕೋರರು ಹೊರಗಿನವರೇ ಅಥವಾ ವಿದ್ಯಾರ್ಥಿಗಳೇ ಎಂದು ಕಂಡುಹಿಡಿಯಲು ಪೊಲೀಸರು ಕ್ಯಾಂಪಸ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ಸಂತ್ರಸ್ತೆ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಕ್ಯಾಂಪಸ್’ನ ಹಾಸ್ಟೆಲ್ ನಲ್ಲಿ ವಾಸಿಸುತ್ತಿದ್ದಳು. ಆಕೆ ತನ್ನ ಸ್ನೇಹಿತನ ಜೊತೆ ಇದ್ದಾಗ ಘಟನೆ ನಡೆದಿದೆ.ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಈ ಘಟನೆಯನ್ನು “ನಾಚಿಕೆಗೇಡಿನದು” ಎಂದು ಕರೆದಿದ್ದಾರೆ. ತಮಿಳುನಾಡಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.