ಬೆಂಗಳೂರು : ನನ್ನ ಮೇಲೆ ಕೊಲೆ ಯತ್ನ ನಡೆಸಲಾಗಿದೆ ಎಂದು ಡಿಕೆ ಬ್ರದರ್ಸ್ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮೊಟ್ಟೆ ಎಸೆತ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.
ಇಂದು ವಾರ್ಡ್ ನಂ 42 ಲಕ್ಷ್ಮೀದೇವಿ ನಗರದಲ್ಲಿ ಕಾಂಗ್ರೆಸ್ ಸರ್ಕಾರ, ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮಾಜಿ ಸಂಸದರಾದ ಡಿ.ಕೆ.ಸುರೇಶ್, ಕಾಂಗ್ರೆಸ್ ಮುಖಂಡರಾದ ಹನುಮಂತರಾಯಪ್ಪ ಅವರ ನಿರ್ದೇಶನದಂತೆ ನನ್ನ ಮೇಲೆ ಆ್ಯಸಿಡ್ ದಾಳಿ ಮಾಡಿಸಿದ್ದಾರೆ ಹಾಗೂ ಕೊಲೆ ಮಾಡಲು ಪ್ರಯತ್ನ ಪಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ಟ್ವೀಟ್ ಮಾಡಿದ್ದಾರೆ.
ಅಲ್ಲದೇ ಈ ಘಟನೆಗಳ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್, ಹನುಮಂತರಾಯಪ್ಪ, ಕುಸುಮಾ ಅವರೇ ಕಾರಣ. ನನ್ನ ಕೊಲೆಯಾದರೇ ಘಟನೆಗಳಿಗೆ ಅವರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆಂದು ಶಾಸಕ ಮುನಿರತ್ನ ತೆರಳುತ್ತಿದ್ದ ವೇಳೆ ಅವರ ಕಾರಿನ ಮೇಲೆ ಕೆಲವರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರೇ ಮೊಟ್ಟೆ ಎಸೆದಿದ್ದಾರೆ ಎಂದು ಮುನಿರತ್ನ ಹಾಗೂ ಅವರ ಬೆಂಬಲಿಗರು ಆರೋಪಿಸಿದ್ದಾರೆ.
ಇಂದು ವಾರ್ಡ್ ನಂ 42 ಲಕ್ಷ್ಮೀದೇವಿ ನಗರದಲ್ಲಿ ಕಾಂಗ್ರೆಸ್ ಸರ್ಕಾರ, ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮಾಜಿ ಸಂಸದರಾದ ಡಿ.ಕೆ.ಸುರೇಶ್, ಕಾಂಗ್ರೆಸ್ ಮುಖಂಡರಾದ ಹನುಮಂತರಾಯಪ್ಪ ಅವರ ನಿರ್ದೇಶನದಂತೆ ನನ್ನ ಮೇಲೆ ಆ್ಯಸಿಡ್ ದಾಳಿ ಮಾಡಿಸಿದ್ದಾರೆ ಹಾಗೂ ಕೊಲೆ ಮಾಡಲು ಪ್ರಯತ್ನ ಪಟ್ಟಿದ್ದಾರೆ.#RRNagar #BJPGovernment #BJP pic.twitter.com/ph0fdpBs1y
— Munirathna (@MunirathnaMLA) December 25, 2024