ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ತಲೆಗೆ ಪೆಟ್ಟಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮೊಟ್ಟೆ ಎಸೆತದಿಂದ ಅವರ ತಲೆಗೆ ಪೆಟ್ಟಾಗಿದ್ದು, ಕೆಸಿ ಜನರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರ ಸಲಹೆ ಮೇರೆಗೆ 2 ಗಂಟೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಟ್ಟೆ ಜೊತೆಗೆ ಆ್ಯಸಿಡ್ ಮಾದರಿಯ ದ್ರವ್ಯ ಎಸೆಯಲಾಗಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆಂದು ಶಾಸಕ ಮುನಿರತ್ನ ತೆರಳುತ್ತಿದ್ದ ವೇಳೆ ಅವರ ಕಾರಿನ ಮೇಲೆ ಹಾಗೂ ಮುನಿರತ್ನ ಮೇಲೆ ಕೆಲವರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರೇ ಮೊಟ್ಟೆ ಎಸೆದಿದ್ದಾರೆ ಎಂದು ಮುನಿರತ್ನ ಹಾಗೂ ಅವರ ಬೆಂಬಲಿಗರು ಆರೋಪಿಸಿದ್ದಾರೆ. ಮುನಿರತ್ನ ಮೇಲೆ ಮೊಟ್ಟೆ ಎಸೆದು ಕಾರಿನ ಮೇಲೆ ಕಲ್ಲು ತೂರಿದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.