HomeEntertainmentಕಾಲ್ತುಳಿತದಲ್ಲಿ ಮಹಿಳಾ ಅಭಿಮಾನಿ ಸಾವು ಪ್ರಕರಣ: ಮೃತಳ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ಘೋಷಣೆ

ಕಾಲ್ತುಳಿತದಲ್ಲಿ ಮಹಿಳಾ ಅಭಿಮಾನಿ ಸಾವು ಪ್ರಕರಣ: ಮೃತಳ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ಘೋಷಣೆ

ಹೈದರಾಬಾದ್: ಪುಷ್ಪಾ-2 ಸಿನಿಮಾ ಪ್ರೀಮಿಯರ್ ಶೋ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೆಟರ್ ನಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳಾ ಅಭಿಮಾನಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ 2 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ನಟ ಅಲ್ಲು ಅರ್ಜುನ್ ಅವರ ಅಭಿಮಾನಿ ರೇವತಿ ಮೃತಪಟ್ಟಿದ್ದರು. ಆಕೆಯ ಮಗ ಶ್ರೀಜಾ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಬಂಧನಕ್ಕೀಡಾಗಿ ಜಾಮೀನು ಮೇಲೆ ಬಿಡಿಗಡೆಯಾಗಿದ್ದರು. ಮಹಿಳಾ ಅಭಿಮಾನಿ ಸಾವು ಘಟನೆ ಬಗ್ಗೆ ತೀವ್ರ ಖೇದ ವ್ಯಕ್ತಪಡಿಸಿದ್ದ ಅಲ್ಲು ಅರ್ಜುನ್ 25 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದರು. ಆದರೆ ಕೇವಲ ಘೋಷಣೆ ಮಾತ್ರ ಮಾಡಿದ್ದಾರೆ ಪರಿಹಾರ ನೀಡಿಲ್ಲ ಎಂಬ ಆರೋಪ ಕೂಡ ಕೇಳಿಬಂದಿತ್ತು. ಈ ಘಟನೆಗಳ ಬೆನ್ನಲ್ಲೇ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಮೃತಳ ಕುಟುಂಬಕ್ಕೆ 2 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಅಲ್ಲು ಅರ್ಜುನ್ ಕಡೆಯಿಂದ 1 ಕೋಟಿ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇನ್ನು ಪುಷ್ಪ-2 ಸಿನಿಮಾ ನಿರ್ದೇಶಕರು ಹಾಗೂ ನಿರ್ಮಾಪಕರು ತಲಾ 50 ಲಕ್ಷ ರೂ.ನಂತೆ 1 ಕೋಟಿ ಸೇರಿ ಒಟ್ಟು 2 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular