ಕಾರವಾರ: ಸಮುದ್ರದಲ್ಲಿ ಸುಳಿಗೆ ಸಿಲುಕಿದ ಇಬ್ಬರು ವಿದೇಶಿ ಪ್ರವಾಸಿಗರನ್ನು ಜೀವ ರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ಕುಡ್ಲೆ ಕಡಲ ತೀರದಲ್ಲಿ ಘಟನೆ ನಡೆದಿದೆ. ಕುಡ್ಲೆ ಕಡಲ ತೀರಕ್ಕೆ ಆಗಮಿಸಿದ್ದ ರಷ್ಯಾದ ಇರೀನಾ(38), ಆನ್ಯಾ(27) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಾಯಕ್ಕೆ ಸಿಲುಕಿದ್ದ ಇಬ್ಬರನ್ನು ಜೀವ ರಕ್ಷಕ ಸಿಬ್ಬಂದಿ ನಾಗೇಂದ್ರ ಕುರ್ಲೆ, ಮಂಜುನಾಥ್ ಅವರು ರಕ್ಷಣೆ ಮಾಡಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.