ಹುಬ್ಬಳ್ಳಿ: ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ನಿಜಲಿಂಗಪ್ಪ ಬೇಪುರಿ(58), ಸಂಜಯ್ ಸವದತ್ತಿ(18) ಮೃತಪಟ್ಟವರು. 9 ಗಾಯಾಳುಗಳ ಪೈಕಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಮೃತಪಟ್ಟಿದ್ದಾರೆ. ಉಳಿದ 7 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.
ಸಿಲಿಂಡರ್ ಸೋರಿಕೆಯಿಂದ ಸಂಭವಿಸಿದ್ದ ಅಗ್ನಿದುರಂತದಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರ ಚಿಕಿತ್ಸೆಗಾಗಿ ಬೆಂಗಳೂರಿನಿಂದ ತಜ್ಞ ವೈದ್ಯರಾದ ಡಾ.ಸ್ಮಿತಾ ಅವರು ಆಗಮಿಸಿದ್ದರು.