ಬೆಂಗಳೂರು : ರೈಲಿಗೆ ಸಿಲುಕಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ಮಾಗಡಿ ರಸ್ತೆಯ ರೈಲ್ವೇ ಗೇಟ್ ಬಳಿ ನಡೆದಿದೆ.
ಮೃತ ಯುವಕರನ್ನ ಸೂರ್ಯ, ಶರತ್ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 10:30 ರ ವೇಳೆಗೆ ಘಟನೆ ನಡೆದಿದೆ,
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಯುವಕರು ಟ್ರ್ಯಾಕ್ ಮೇಲೆ ಕೂತಿದ್ದಾಗ ರೈಲು ಹರಿದಿದ್ದು, ಗಂಭೀರವಾಗಿ ಗಾಯಗೊಂಡ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.