ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆಯಿದ್ದು, ಉಳಿದ ಭಾಗದಲ್ಲಿ ಒಣಹವೆ ಇರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಡಿಸೆಂಬರ್ 26, 27ರಂದು ಉತ್ತರ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರೆಯುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.