ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಭವನದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿಸೆಂಬರ್ 28 ರಂದು ವಿಜಯಪುರ ಬಂದ್ ಗೆ ಕರೆ ನೀಡಲಾಗಿದೆ.
ಅಹಿಂದ, ದಲಿತ ಸಂಘಟನೆಗಳ ಒಕ್ಕೂಟ, ಡಾ. ಅಂಬೇಡ್ಕರ್ ವಿಚಾರವಾದಿ ಬಳಗದಿಂದ ಬಂದ್ ಗೆ ಕರೆ ನೀಡಲಾಗಿದೆ ಎಂದು ಅಹಿಂದ ಮುಖಂಡ ಮತ್ತು ಮಾಜಿ ಶಾಸಕ ಪ್ರೊ. ರಾಜು ಅಲಗೂರ ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ನೀಡಿದ ಹೇಳಿಕೆ ಇಡೀ ಶೋಷಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಸಂವಿಧಾನ ಬದಲಾಯಿಸುವ ಹುನ್ನಾರದ ದುರಾಲೋಚನೆಯಿಂದ ಅಮಿತ್ ಶಾ ಹೀಗೆ ಮಾತನಾಡಿದ್ದಾರೆ ಎಂದು ಆರೋಪಿಸಿದ್ದು, ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ಡಿಸೆಂಬರ್ 28 ರಂದು ವಿಜಯಪುರ ಬಂದ್ ಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.