ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ನಲ್ಲಿ ಪೊಲೀಸರು ಫೈರಿಂಗ್ ಮಾಡಿ ರೌಡಿಶೀಟರ್ ನ್ನು ಬಂಧಿಸಿದ್ದಾರೆ.
ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ರೌಡಿಶೀಟರ್ ಸುನೀಲ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಆತನನ್ನು ವಶಕ್ಕೆ ಪಡೆದುಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅತ್ತಿಬೆಲೆಯ ಬಂಡಾಪುರ ಬಳಿ ಪೊಲೀಸರು ರೌಡಿಶೀಟರ್ ‘ಸುನೀಲ್ ಅಲಿಯಾಸ್ ಹಾವೇರಿ’ ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.