HomeKarnatakaಹೈಕೋರ್ಟ್ ನ್ಯಾಯಮೂರ್ತಿ ಹೆಸರಲ್ಲಿ 50 ಲಕ್ಷ ರೂ.ಗೆ ಬೇಡಿಕೆ: ವಕೀಲೆ ವಿರುದ್ಧ ಎಫ್ಐಆರ್ ದಾಖಲು

ಹೈಕೋರ್ಟ್ ನ್ಯಾಯಮೂರ್ತಿ ಹೆಸರಲ್ಲಿ 50 ಲಕ್ಷ ರೂ.ಗೆ ಬೇಡಿಕೆ: ವಕೀಲೆ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರ ಹೆಸರಲ್ಲಿ ವಕೀಲೆಯೊಬ್ಬರು ಕಕ್ಷಿದಾರರ ಬಳಿ 50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಹೈಕೋರ್ಟ್ ನ ಜಂಟಿ ರಿಜಿಸ್ಟ್ರಾರ್ ಎಂ. ರಾಜೇಶ್ವರಿ ಅವರ ದೂರು ಆಧರಿಸಿ ವಕೀಲೆ ದಯೀನಾ ಬಾನು ವಿರುದ್ಧ ವಂಚನೆ ಮತ್ತು ಅಪ್ರಾಮಾಣಿಕತೆ ಆರೋಪದ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

2021ರಲ್ಲಿ ಬೈಯಪ್ಪನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ವಿ. ವಿಷ್ಣುದೇವನ್ ಅಲಿಯಾಸ್ ವಿಶು(27) 3 ವರ್ಷಗಳಿಂದ ಜೈಲಿನಲ್ಲಿದ್ದು, ಪುತ್ರನಿಗೆ ಜಾಮೀನು ಕೊಡಿಸಲು ವಿಷ್ಣು ತಾಯಿ ಥೆರೆಸಾ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಆರೋಪಿ ವಿಷ್ಣುಗೆ ವಿಚಾರಣಾ ನ್ಯಾಯಾಲಯ ಈ ನಡುವೆ ಜಾಮೀನು ತಿರಸ್ಕರಿಸಿದ್ದು, ಇದನ್ನು ಪ್ರಶ್ನಿಸಿ ಥೆರೆಸಾ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಕೀಲೆ ದಯೀನಾ ಬಾನು ಅವರು ವಕಾಲತ್ತು ವಹಿಸಿದ್ದಾರೆ. ಈ ಅರ್ಜಿ ನ್ಯಾಯಮೂರ್ತಿ ಹೆಚ್‌.ಪಿ. ಸಂದೇಶ್ ಅವರ ಮುಂದೆ ವಿಚಾರಣಾ ಹಂತದಲ್ಲಿದೆ. ಸಂದೇಶ್ ಅವರು ವಿಷ್ಣುಗೆ ಜಾಮೀನು ನೀಡಲು 50 ಲಕ್ಷ ರೂ. ಕೇಳುತ್ತಿದ್ದಾರೆ. ಅಷ್ಟು ಹಣ ಕೊಡಲು ಸಾಧ್ಯವಾಗದಿದ್ದರೆ ಬೇರೆ ವಕೀಲರನ್ನು ನೇಮಿಸಿಕೊಳ್ಳಿ ಎಂದು ದಯೀನಾ ಬಾನು ಬೇಡಿಕೆ ಇಟ್ಟಿದ್ದಾರೆ ಎಂದು ಥೆರೆಸಾ ಅವರು ರಿಜಿಸ್ಟ್ರಾರ್ ಮತ್ತು ನ್ಯಾಯಮೂರ್ತಿಗಳಿಗೆ ದೂರು ನೀಡಿದ್ದರು.

ಈ ಮಾಹಿತಿ ತಿಳಿದ ನ್ಯಾಯಮೂರ್ತಿ ಸಂದೇಶ್ ಅವರು ವಕೀಲೆಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ರಿಜಿಸ್ಟ್ರಾರ್ ಗೆ ಸೂಚನೆ ನೀಡಿದ್ದು, ಅಂತೆಯೇ ಜಂಟಿ ರಿಜಿಸ್ಟ್ರಾರ್ ಎಂ. ರಾಜೇಶ್ವರಿ ದೂರು ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular