ಬೆಂಗಳೂರು: ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಐಶ್ವರ್ಯ ಗೌಡಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ವರಾಹಿ ವರ್ಲ್ಡ್ ಜ್ಯುವೆಲರಿ ಶಾಪ್ ಮಾಲಕಿ ವನಿತಾ ಐತಾಳ್ ಅವರಿಗೆ 8 ಕೋಟಿ 14 ಲಕ್ಷ ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ ಪ್ರಕರಣ ಸಂಬಂಧ ವನಿತಾ ಐತಾಳ್, ಚಂದ್ರ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಐಶ್ವರ್ಯ ಗೌಡ, ಹರೀಶ್ ಗೌಡ ಹಾಗೂ ನಟ ಧರ್ಮೇಂದ್ರ ಅವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.
ಇದೀಗ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚಂದ್ರಾ ಲೇಔಟ್ ಠಾಣೆ ಪೊಲೀಸರು ಐಶ್ವರ್ಯ ಗೌಡಗೆ ನೋಟಿಸ್ ಜಾರಿ ಮಾಡಿದ್ದಾರೆ. ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.