ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ಬಗ್ಗೆ ಬಿಜೆಪಿಯವರ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದರು.
ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡಲು ಪ್ರತಾಪ್ ಸಿಂಹ ಒಪ್ಪಿದ್ದಾರೆ. ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿಸಿದರು.