HomeEntertainmentಮಾರ್ಚ್ ನಲ್ಲಿ ಜಪಾನ್ ನಲ್ಲಿ ಬಿಡುಗಡೆಯಾಗುತ್ತಿದೆ ಜೂನಿಯರ್ NTR ಅಭಿನಯದ ʼದೇವರʼ

ಮಾರ್ಚ್ ನಲ್ಲಿ ಜಪಾನ್ ನಲ್ಲಿ ಬಿಡುಗಡೆಯಾಗುತ್ತಿದೆ ಜೂನಿಯರ್ NTR ಅಭಿನಯದ ʼದೇವರʼ

ಸೆಪ್ಟೆಂಬರ್ 27 ರಂದು ತೆರೆಕಂಡಿದ್ದ ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಈ ಸಿನಿಮಾ ಇದೀಗ ಮಾರ್ಚ್ 28 ರಂದು ಜಪಾನ್ ನಲ್ಲಿ ರಿಲೀಸ್ ಆಗುತ್ತಿದೆ.

ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ. ಜಪಾನ್ ನಲ್ಲಿ ಜೂನಿಯರ್ ಎನ್ಟಿಆರ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಸಜ್ಜಾಗಿದ್ದಾರೆ.

ಕೊರಟಾಲ ಶಿವ ನಿರ್ದೇಶನದ ಈ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್ ಸೇರಿದಂತೆ ಸೈಫ್ ಅಲಿ ಖಾನ್, ಜಾನ್ವಿ ಕಪೂರ್, ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೋ, ಹರಿ ತೇಜ, ಗೆಟಪ್ ಶ್ರೀನು, ಭಾರ್ಗವಿ ಹಾಗೂ ಈಶ್ವರ್ ರೆಡ್ಡಿ ಬಣ್ಣ ಹಚ್ಚಿದ್ದು, ಅನಿರುದ್ಧ ರವಿಚಂದರ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವ ಸುಧಾ ಆರ್ಟ್ಸ್ ಹಾಗೂ ಎಂಟಿಆರ್ ಆರ್ಟ್ಸ್ ಬ್ಯಾನರ್ ನಲ್ಲಿ ಸುಧಾಕರ ಮಿಕ್ಕಿಲಿನೇನಿ, ಕೊಸರಾಜು ಹರಿಕೃಷ್ಣ ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್  ಪ್ರಸಾದ್ ಸಂಕಲನ ಹಾಗೂ  ಆರ್. ರತ್ನವೇಲು ಅವರ ಛಾಯಾಗ್ರಹಣವಿದೆ.

 

View this post on Instagram

 

A post shared by Telugu FilmNagar (@telugufilmnagar)

 

 

For Latest News Updates, Join Our Whatsapp Community🚩
RELATED ARTICLES

Most Popular