ಬೆಳಗಾವಿ: ಬೆಳಗಾವಿಯಲ್ಲಿ ಮಹಾತ್ಮಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಣಿ ಸಭೆಗೆ ಚಾಲನೆ ದೊರೆತಿದೆ.
ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ವರಿಷ್ಠರು ಪಾದಯಾತ್ರೆ ಮೂಲಕ ಆಗಮಿಸಿದರು. ಬಳಿಕ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕಾರಣಿಗೆ ಚಾಲನೆ ನೀಡಿದರು.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕಾಂಗ್ರೆಸ್ ನಾಯಕರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶಾಲು ಹೊದೆಸಿ ಬರಮಾಡಿಕೊಂಡರು.