ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಮೂಲಗಳನ್ನು ವರದಿ ತಿಳಿಸಿದೆ.
92 ವರ್ಷದ ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲು ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.
ಅವರ ಕಚೇರಿಯ ಪ್ರಕಾರ, ಮಾಜಿ ಪ್ರಧಾನಿ ತೀವ್ರ ಉಸಿರಾಟದ ತೊಂದರೆಯನ್ನು ಎದುರಿಸುತ್ತಿದ್ದಾರೆ ಮತ್ತು ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ.