ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪ್ರತಿ ಪಕ್ಷಗಳ ಮೈತ್ರಿಕೂಟ ಇಂಡಿಯಾ(I.N.D.A.I.)ದಲ್ಲಿ ಭಿನ್ನಮತ ಭುಗಿಲೆದ್ದಿದೆ.
ಕಾಂಗ್ರೆಸ್ ನಾಯಕ ಅಜಯ್ ಮಾಕೇನ್ ಅವರು ಇತ್ತೀಚೆಗೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾಡಿದ ಆರೋಪಗಳಿಂದ ಕೆರಳಿರುವ ಆಮ್ ಆದ್ಮಿ ಪಾರ್ಟಿ ‘ಇಂಡಿಯಾ’ ಮೈತ್ರಿಕೂಟದಿಂದ ಕಾಂಗ್ರೆಸ್ ಪಕ್ಷವನ್ನೇ ಹೊರಗಿಡಲು ಅಭಿಯಾನ ಆರಂಭಿಸಿದೆ.
ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದು, ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಹೊರಗಿಡಲು ಇತರೆ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ್ದಾರೆ.
ಕೇಜ್ರಿವಾಲ್ ಬಗ್ಗೆ ತುಚ್ಚವಾಗಿ ಮಾತನಾಡಿದ ಅಜಯ್ ಮಾಕೇನ್ ಸೇರಿ ಹಲವು ಹಿರಿಯ ನಾಯಕರ ವಿರುದ್ಧ 24 ಗಂಟೆಯೊಳಗೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷಗಳು ವಿಧಿಸಿದ್ದು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ.