ಬೆಂಗಳೂರು: ಬೆಂಗಳೂರಿನಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದ್ದು, ಗಾಂಜಾ ಸಾಗಿಸುತ್ತಿದ್ದ ಎಂಟು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ರೈಲುಗಳಲ್ಲಿ ಆರೋಪಿಗಳು ಬೆಂಗಳೂರಿಗೆ ಗಾಂಜಾ ತರುತ್ತಿದ್ದರು. ಆಂಧ್ರಪ್ರದೇಶ, ತಮಿಳುನಾಡು, ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಪ್ರಶಾಂತಿ ಎಕ್ಸ್ ಪ್ರೆಸ್ ಮತ್ತು ಹಾತಿಯಾ ಎಕ್ಸ್ ಪ್ರೆಸ್ ಬೋಗಿಗಳಲ್ಲಿದ್ದ ಗಾಂಜಾ ಜಪ್ತಿ ಮಾಡಲಾಗಿದೆ. ಎಂಟು ಜನರನ್ನು ಬೆಂಗಳೂರು ರೈಲ್ವೇ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.