ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಪ್ರಕರಣದ ಆರೋಪಿಗಳಾದ ಚಂದ್ರು, ವಿಶ್ವನಾಥ, ಕೃಷ್ಣಮೂರ್ತಿಗೆ ಗುರುವಾರ 32 ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಲ್ಗೊಳ್ಳಲು ತೆರಳುತ್ತಿದ್ದ ವೇಳೆ ಶಾಸಕ ಮುನಿರತ್ನ ಮೇಲೆ ಮಹಾಲಕ್ಷ್ಮೀ ಲೇಔಟ್ ವ್ಯಾಪ್ತಿಯಲ್ಲಿ ಮೊಟ್ಟೆ ದಾಳಿ ನಡೆದಿದೆ. ಈ ವೇಳೆ ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಮುನಿರತ್ನ ಅವರನ್ನು ರಕ್ಷಿಸಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದ ಮುನಿರತ್ನ, ನನ್ನ ಕೊಲೆ ಯತ್ನ ನಡೆದಿದೆ. ಮೊಟ್ಟೆ ದಾಳಿಗೆ ಡಿ.ಕೆ.ಸಹೋದರರು, ಹನುಮಂತರಾಯಪ್ಪ, ಕುಸುಮಾ ಹಾಗೂ ಕೆಲ ರೌಡಿಗಳು ಕಾರಣ ಎಂದು ನೇರವಾಗಿ ಆರೋಪಿಸಿದ್ದರು.