ಕಪ್ಪು ಪಟ್ಟಿ ಧರಿಸಿ ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಟೀಮ್ ಇಂಡಿಯಾ ಕ್ರಿಕೆಟ್ ಆಟಗಾರರು ಗೌರವ ಸೂಚಿಸಿದ್ದಾರೆ.
ಹೌದು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ಈ ಹಿನ್ನೆಲೆ ಟೀಮ್ ಇಂಡಿಯಾ ಕ್ರಿಕೆಟ್ ಆಟಗಾರರು ಕಪ್ಪು ಪಟ್ಟಿ ಧರಿಸಿ ಗೌರವ ಸೂಚಿಸಿದ್ದಾರೆ.
ರೋಹಿತ್ ಶರ್ಮಾ ನೇತೃತ್ವದ ಭಾರತ ಪುರುಷರ ತಂಡವು ಮೆಲ್ಬೋರ್ನ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್ ಆಡುತ್ತಿದೆ.ಮತ್ತೊಂದೆಡೆ, ಮಹಿಳಾ ತಂಡವು ವಡೋದರಾದಲ್ಲಿ ನಡೆಯಲಿರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ.ನಿಧನರಾದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಸ್ಮರಣಾರ್ಥ ಗೌರವದ ಸಂಕೇತವಾಗಿ ಭಾರತ ತಂಡವು ಕಪ್ಪು ತೋಳಿನ ಬ್ಯಾಂಡ್ಗಳನ್ನು ಧರಿಸಿದೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.