HomeKarnatakaBREAKING : ಬೆಂಗಳೂರಿನಲ್ಲಿ ಬೈಕ್ 'ವ್ಹೀಲಿಂಗ್' ಮಾಡುವಾಗ ಕ್ಯಾಂಟರ್ ಡಿಕ್ಕಿ ; ಸ್ಥಳದಲ್ಲೇ ಇಬ್ಬರು ಯುವಕರು...

BREAKING : ಬೆಂಗಳೂರಿನಲ್ಲಿ ಬೈಕ್ ‘ವ್ಹೀಲಿಂಗ್’ ಮಾಡುವಾಗ ಕ್ಯಾಂಟರ್ ಡಿಕ್ಕಿ ; ಸ್ಥಳದಲ್ಲೇ ಇಬ್ಬರು ಯುವಕರು ಸಾವು.!

ಬೆಂಗಳೂರು : ವ್ಹೀಲಿಂಗ್ ಕ್ರೇಜ್ ಗೆ ಇಬ್ಬರು ಬಲಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ನಡೆದಿದೆ.ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್ ಡಿಕ್ಕಿಯಾಗಿ  ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

 ದೇವನಹಳ್ಳಿ ತಾಲೂಕಿನ ವಿಜಯಪುರ ಬೈಪಾಸ್ ನಲ್ಲಿ ಈ ಘಟನೆ ನಡೆದಿದೆ. ವ್ಹೀಲಿಂಗ್ ಮಾಡುತ್ತಿದ್ದಾಗ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಅರ್ಫಾಜ್ (22) ಮನೋಜ್ (22) ಎಂಬ ಯುವಕರು ಮೃತಪಟ್ಟಿದ್ದಾರೆ.

ಮೃತ ಯುವಕರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು,  ಘಟನೆ ನಡೆದ ಸ್ಥಳಕ್ಕೆ  ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular