ಚೆನ್ನೈ: ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಾ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಡಿಎಂಕೆ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ.
ತಮಿಳುನಾಡಿನ ಡಿಎಂ ಕೆ ಸರ್ಕಾರದ ನಡೆ ಖಂಡಿಸಿ, ಹಾಗೂ ನ್ಯಾಯ ಸಿಗುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿಯೇ ತಮ್ಮ ಪಾದರಕ್ಷೆಗಳನ್ನು ತೊರೆದು ಶಪಥ ಮಾಡಿದ್ದರು.
ಈ ಬೆಳವಣಿಗೆ ಬೆನ್ನಲ್ಲೇ ಇಂದು ಅಣ್ಣಾ ವಿಶ್ವ ವಿದ್ಯಾಲಯದ ಮುಂದೆ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಅಣ್ಣಾಮಲೈ ಚಾಟಿಯಿಂದ ಹೊಡೆದುಕೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಇತರ್ ಬಿಜೆಪಿ ಸದಸ್ಯರು ಅಣ್ಣಾಮಲೈ ಅವರನ್ನು ತಡೆದಿದ್ದಾರೆ.