ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮಕ್ಕೆಂದು ಬೆಳಗಾವಿಗೆ ಆಗಮಿಸಿದ್ದ ರಾಜಸ್ಥಾನ ರಾಜ್ಯಸಭಾ ಸದಸ್ಯ ನೀರಜ್ ಡಾಂಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಬೆಳಗಾವಿ ಆಸ್ಪತೆಗೆ ದಾಖಲಾಗಿರುವ ನಿರಜ್ ಡೊಂಗಾ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಅವರ ಆರೋಗ್ಯ ವಿಚಾರಿಸಿ, ವೈದ್ಯರಿಂದ ಮಾಹಿತಿ ಪಡೆದರು. ಶೀಘ್ರವಾಗಿ ಗುಣಮುಖರಾಗಿವಂತೆ ಹಾರೈಸಿದರು.
ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ತೆಂಗಿನ ನಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ನಟರಾಜ್ ಜಾನಕಿರಾಮ್ ಉಪಸ್ಥಿತರಿದ್ದರು.