ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿರುವ 126 ಅಂಗನವಾಡಿ ಕಾರ್ಯಕರ್ತೆಯರ ಮತ್ತು 448 ಸಹಾಯಕಿಯರ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05/01/2025ರ ಆಗಿದೆ.
ಆಸಕ್ತರು http://karnemakaone.kar.nic.in/abcd/ ವೆಬ್ಸೈಟ್ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ, ಸಲ್ಲಿಕೆಯ 02 ಮತ್ತು 03ನೇ ಹಂತದಲ್ಲಿ ಆಪ್ಲೋಡ್ ಮಾಡಿ 03ನೇ ಹಂತದಲ್ಲಿ ಇ-ಹಸ್ತಾಕ್ಷರವಾಗಿರುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಕೆಯನ್ನು ಪೂರ್ಣಗೊಳಿಸಿ 04ನೇ ಹಂತದಲ್ಲಿ ಇ-ಸಹಿಯಾದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295514ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.