ವಿಜಯಪುರ: ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಅನಿರುದ್ಧ ಸಾಮ್ರಾಣಿ (20) ನೀರು ಪಾಲಾಗಿರುವ ಯುವಕ. ಶಾಲೆಗೆ ರಜೆ ಘೋಷಣೆ ಹಿನ್ನೆಲೆಯಲ್ಲಿ ಸಹೋದರ ಅನಿಕೇತ್ ಸಾಬ್ರಾಣಿ ಸೇರಿ ಮೂವರು ಕೆರೆಗೆ ಈಜಲೆಂದು ಹೋಗಿದ್ದರು. ಈ ವೇಳೆ ಅನಿರುದ್ಧಗೆ ಈಜಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ, ಮೃತದೇಹಕ್ಕಾಗಿ ಕೆರೆಯಲ್ಲಿ ಶೋಧ ನಡೆಸಿದ್ದಾರೆ. ಸ್ಥಳದಲ್ಲಿ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.