ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಒಂದೇ ಸಮನೆ ಜಿಟಿ ಜಿಟಿ ಮಳೆಯಾಗುತ್ತಿದ್ದು, ಇದರೊಂದಿಗೆ ಶೀತ ಗಾಳಿಯೂ ಹೆಚ್ಚಿದೆ.
ಬೆಂಗಳೂರಿನಲ್ಲಿ ಒಂದೆಡೆ ಮಳೆ, ಶೀತಗಾಳಿ, ದಟ್ಟವಾದ ಮೋಡಕವಿದ ವಾತಾವರಣವಿದ್ದು, ಇಡೀ ನಗರವನ್ನು ವಾತಾವರಣ ಕೂಲ್ ಕೂಲ್ ಮಾಡಿದೆ. ನಿನ್ನೆಯಿಂದ ಬೆಂಗಳೂರಿನಲ್ಲಿ ಒಂದೇ ಸಮನೆ ಜಿಟಿ ಜಿಟಿ ಮಳೆಯಾಗುತ್ತಿದ್ದು, ಮೈಕೊರೆವ ಚಳಿ ಹೆಚ್ಚಾಗಿದೆ.
ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.